alex Certify ಬಾಬರ್ ಅಜಮ್ ಆಟಕ್ಕೆ ಬ್ರೇಕ್ ಹಾಕಲು ಸಜ್ಜಾಗಿದ್ದಾರೆ ಭಾರತದ ಬೌಲರ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಬರ್ ಅಜಮ್ ಆಟಕ್ಕೆ ಬ್ರೇಕ್ ಹಾಕಲು ಸಜ್ಜಾಗಿದ್ದಾರೆ ಭಾರತದ ಬೌಲರ್ಸ್

ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್ 12ರ ನಾಲ್ಕನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡ ಮುಖಾಮುಖಿಯಾಗಲಿದ್ದು, ಪಾಕಿಸ್ತಾನ ತಂಡದ ನಾಯಕ ಹಾಗೂ ಭರವಸೆಯ ಆಟಗಾರ ಬಾಬರ್ ಅಜಮ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ.

ಐಸಿಸಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ ನಂಬರ್ 2ನೇ ಸ್ಥಾನದಲ್ಲಿದ್ದರೇ ಏಕದಿನ ರ್ಯಾಂಕಿಂಗ್ ನಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. ಇವರ ವಿಕೆಟ್ ಭಾರತ ತಂಡಕ್ಕೆ ಬಹಳ ಮುಖ್ಯವಾಗಿದೆ. ಹೀಗಾಗಿ ಭಾರತೀಯ ಬೌಲರ್‌ ಗಳು ಇವರ ವಿಕೆಟ್‌ ಕಬಳಿಸಲು ಸರ್ವ ಸನ್ನದ್ದರಾಗಿದ್ದಾರೆ.

ಟಿ20 ವಿಶ್ವಕಪ್: ಭಾರತದ ವಿರುದ್ಧ ಗೆಲ್ಲಲು ಪಾಕ್ ತಂಡಕ್ಕೆ ವಿಚಿತ್ರ ಸಲಹೆ ನೀಡಿದ ಶೋಯಬ್ ಆಖ್ತರ್

ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ 61 ಪಂದ್ಯಗಳಾಡಿರುವ ಬಾಬರ್ ಅಜಮ್ 2204 ರನ್ ಗಳಿಸಿದ್ದು, 20 ಅರ್ಧ ಶತಕ ಹಾಗೂ 1 ಶತಕ ಸಿಡಿಸಿದ್ದಾರೆ. ಇವರು ಪಾಕಿಸ್ತಾನ ತಂಡದ ಬೆನ್ನೆಲುಬಾಗಿದ್ದಾರೆ. ಇಂದು ದುಬೈನಲ್ಲಿ ನಡೆಯಲಿರುವ ಈ ಪಂದ್ಯವನ್ನು ವೀಕ್ಷಿಸಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...