ಮುಂಬೈ: 10 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ 50 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಅಮಾನತುಗೊಳಿಸಿದೆ.
2016ರ ಏಪ್ರಿಲ್ ನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ 50 ವರ್ಷದ ವ್ಯಕ್ತಿಯ ಮೇಲೆ ಹೊರಿಸಲಾಗಿತ್ತು. ಮಕ್ಕಳ ರಕ್ಷಣೆಯ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಮುಂಬೈನ ವಿಶೇಷ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿದೆ. ಲೈಂಗಿಕ ಅಪರಾಧಗಳ (ಪೋಕ್ಸೊ) ಕಾಯಿದೆ ಅನ್ವಯ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.
ನ್ಯಾ. ಪಿ.ಡಿ.ನಾಯಕ್ ಅವರು ಕೆಳ ನ್ಯಾಯಾಲಯದ ಸಾಕ್ಷ್ಯವನ್ನು ಪರಿಶೀಲಿಸಿದ್ರು. ಸಂತ್ರಸ್ತನಿಗೆ ಆರೋಪಿಗಳ ಪರಿಚಯವಿಲ್ಲ ಎಂಬುದು ಸ್ಪಷ್ಟವಾಗಿದೆ. 10 ವರ್ಷದ ಬಾಲಕನ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಪ್ರಾಸಿಕ್ಯೂಷನ್ ಪ್ರಕರಣವಾಗಿತ್ತು. ಏಪ್ರಿಲ್ 8, 2016 ರಂದು, ಸಂತ್ರಸ್ತನ ತಂದೆ ಕೆಲಸ ಮುಗಿಸಿ ಮನೆಗೆ ಮರಳಿದ್ದರು. ಈ ವೇಳೆ ಬಾಲಕ ಅಸ್ವಸ್ಥ ಸ್ಥಿತಿಯಲ್ಲಿರುವುದನ್ನು ಗಮನಿಸಿದ್ದಾರೆ. ಈ ಬಗ್ಗೆ ಬಾಲಕನ ಬಳಿ ವಿಚಾರಿಸಿದಾಗ ಆರೋಪಿಯು ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಹೇಳಿದ್ದಾನೆ. 5 ರಿಂದ 6 ಬಾರಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಗಿ ಹೇಳಿದ್ದಾನೆ.
ಈ ಸಂಬಂಧ ನಿರ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಆರೋಪಿಯನ್ನು ವಿಚಾರಣೆಗೊಳಪಡಿಸಿ ವಿಶೇಷ ಪೋಕ್ಸೊ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಅದರ ವಿರುದ್ಧ ಆರೋಪಿ ಮೇಲ್ಮನವಿ ಸಲ್ಲಿಸಿದ್ದರು.
ವಾದ-ವಿವಾದಗಳನ್ನು ಆಲಿಸಿದ ನಂತರ, ದಾಖಲೆಯಲ್ಲಿರುವ ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ, ಮೇಲೆ ತಿಳಿಸಿದಂತೆ ದಾಖಲೆಯಲ್ಲಿರುವ ಸಾಕ್ಷ್ಯವನ್ನು ಪರಿಗಣಿಸಿ, ಶಿಕ್ಷೆಯನ್ನು ಅಮಾನತುಗೊಳಿಸಿ, ವ್ಯಕ್ತಿಗೆ ಜಾಮೀನು ಮಂಜೂರು ಮಾಡುವಂತೆ ಆದೇಶಿಸಿದ್ದಾರೆ.