alex Certify ಬಿಎಸ್ಎಫ್ ನ 51 ಯೋಧರಿಗೆ ಕೊರೊನಾ ಸೋಂಕು; ಯಲಹಂಕ ಕ್ಯಾಂಪ್ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದ ಬಿಬಿಎಂಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಎಸ್ಎಫ್ ನ 51 ಯೋಧರಿಗೆ ಕೊರೊನಾ ಸೋಂಕು; ಯಲಹಂಕ ಕ್ಯಾಂಪ್ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ಬಿಎಸ್ಎಫ್ ಕ್ಯಾಂಪ್ ನ 51 ಯೋಧರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಯಲಹಂಕದ ಬಿಎಸ್ಎಫ್ ಕ್ಯಾಂಪ್ ನಲ್ಲಿ 51 ಯೋಧರಲ್ಲಿ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಮೆಘಾಲಯದ ಸಿಂಗಾವ್ ನಿಂದ ವಾಪಸ್ ಆಗಿದ್ದ 683 ಯೋಧರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದ್ದು, ಈ ವೇಳೆ 51 ಯೋಧರಲ್ಲಿ ಸೋಂಕು ದೃಢಪಟ್ಟಿದೆ.

ಯಲಹಂಕ ಬಿಎಸ್ಎಫ್ ಕ್ಯಾಂಪ್ ನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದ್ದು, ಸೋಂಕಿತ ಯೋಧರನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...