ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾವಿಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಬಿಕಾಂ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ.
19 ವರ್ಷದ ಮನೋಜ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಖಾಸಗಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಮನೋಜ್ 3-4 ದಿನಗಳಿಂದ ಡಿಪ್ರೆಷನ್ ನಲ್ಲಿದ್ದ ಎನ್ನಲಾಗಿದೆ. ಇದೀಗ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮನೋಜ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.