ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್, ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಟ್ವಿಟರ್ ನಲ್ಲಿ ಗುಡುಗಿರುವ ಕಾಂಗ್ರೆಸ್, ಒಂದೆಡೆ ಪ್ರಯಾಣಿಕರ ಪರದಾಟ, ಇನ್ನೊಂದೆಡೆ ಅನನುಭವಿ ಖಾಸಗಿ ಚಾಲಕರ ಪೀಕಲಾಟ, ಸರ್ಕಾರದ ಮೊಂಡು ಹಠ, ಖಾಸಗಿ ಬಸ್ ಮಾಲೀಕರ ನಿರಾಕರಣೆ… ಒಟ್ಟಾರೆ ಸಾರಿಗೆ ನೌಕರರ ಮುಷ್ಕರ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಲಕ್ಷ್ಮಣ ಸವದಿಯವರೇ, ಬಿಕ್ಕಟ್ಟು ನಿರ್ವಹಿಸುವುದು ಎಂದರೆ ಸದನದಲ್ಲಿ ಕೂತು ರೋಮಾಂಚನದ ಚಿತ್ರ ವೀಕ್ಷಿಸಿದಷ್ಟು ಸುಲಭವಲ್ಲ ಎಂದು ವ್ಯಂಗ್ಯವಾಡಿದೆ.