alex Certify ಬಿಜೆಪಿಗೆ ಭರ್ಜರಿ ಜಯ: ಈಶ್ವರಪ್ಪ ವಿಶ್ವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಭರ್ಜರಿ ಜಯ: ಈಶ್ವರಪ್ಪ ವಿಶ್ವಾಸ

ಶಿವಮೊಗ್ಗ: ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಘಟನಾತ್ಮಾಕವಾಗಿ ಪ್ರಬಲವಾಗಿದ್ದು, ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರರಿಗೆ ಮನವಿ ಮಾಡಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ಮೋದಿ, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರ ಅಭಿವೃದ್ದಿ ಕಾರ್ಯಕ್ರಮಗಳನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಎರಡು ಶಿಕ್ಷಕರ ಮತ್ತು ಎರಡು ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲೂ ಕೂಡ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಹಿಂದೆಂದೂ ಆಗದಷ್ಟು ಕೆಲವೆಡೆ ಶೇ.85ಕ್ಕೂ ಹೆಚ್ಚು ಮತದಾನವಾಗಿದೆ. ಹಾಗಾಗಿ ವಿಧಾನಪರಿಷತ್ ಚುನಾವಣೆ ನಡೆದ 4 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...