
ಬಿಜೆಪಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯದ ಜನತೆಗೆ ಟೋಪಿ ಹಾಕುವ ಕೆಲಸ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಈ ಆಟ ಹೆಚ್ಚು ದಿನ ನಡೆಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸದ್ಯದಲ್ಲೇ ಪಕ್ಷದ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ರಾಜ್ಯದ ಜನತೆ ಈ ಬಾರಿ ನಮ್ಮ ಪಕ್ಷವನ್ನು ಆಶೀರ್ವದಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.