ಅಂಬಲಾದ ಬಿಜೆಪಿ ಐಟಿ ಸೆಲ್ ಇನ್ಚಾರ್ಜ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಒಂದು ದಿನದ ಬಳಿಕ ಪೊಲೀಸರು ಫೌಲ್ ಪ್ಲೇ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಬಿಜೆಪಿ ನಾಯಕ ವಿಕ್ರಮ್ಜೀತ್ ಸಿಂಗ್ ನಾಗಿ (43) ಭಾನುವಾರದಂದು ಅಮೃತಸರದ ಕ್ರಾಸ್ ರಸ್ತೆ 1ರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಪವಿಭಾಗೀಯ ಸಿವಿಲ್ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂಬ ಅಂಬಾಲಾ ಕ್ಯಾಂಟ್ ಠಾಣೆಯ ಇನ್ಸ್ಪೆಕ್ಟರ್ ನರೇಶ್ ಕುಮಾರ್ ತಿಳಿಸಿದ್ದಾರೆ.
ಔಪಚಾರಿಕವಾಗಿ ವರದಿಯನ್ನು ನಿರೀಕ್ಷಿಸಲಾಗಿದೆಯಾದರೂ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇವರದ್ದು ಸಹಜ ಸಾವು ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಶವ ಪರೀಕ್ಷೆ ನಡೆಸಿದ ಫೋರೆನ್ಸಿಕ್ ತಜ್ಞ ಡಾ. ಮುನೀಶ್ ಸಿಂಗ್ಲಾ, ವಿಜ್ರಮ್ಜೀತ್ ಸಿಂಗ್ ನಾಗಿ ಅತಿಯಾಗಿ ಮದ್ಯ ಸೇವನೆಯಿಂದ ಅವರು ಗಂಭೀರವಾದ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಅಂತಿಮ ಹಂತದಲ್ಲಿದ್ದ ನಾಗಿ ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ಅವರ ದೇಹ ನೀಲಿ ಬಣ್ಣಕ್ಕೆ ತಿರುಗಿತ್ತು. ಅವರು ವಿಷ ಸೇವಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದರು.