alex Certify ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಓರ್ವ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ನಳೀನ್ ಕಟೀಲ್ ಹೇಳಿಕೆಗೆ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯತ್ತ ಧಾವಿಸಿದ ಪ್ರತಿಭಟನಾ ನಿರತ ಯುವ ಕಾಂಗ್ರೆಸ್ ಕಾರ್ಯಕರ್ತರು, ಕಟೀಲ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಆಗಾಗ ಮಕ್ಕಳನ್ನು ಕಾಡುವ ತಲೆನೋವಿನ ಬಗ್ಗೆ ನಿರ್ಲಕ್ಷ್ಯ ಬೇಡ

ಇದೇ ವೇಳೆ ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ತಕ್ಷಣ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...