alex Certify ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಊಹಾಪೋಹಕ್ಕೆ ತೆರೆ ಎಳೆದ ರಾಹುಲ್‌ ದ್ರಾವಿಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಊಹಾಪೋಹಕ್ಕೆ ತೆರೆ ಎಳೆದ ರಾಹುಲ್‌ ದ್ರಾವಿಡ್

ಈ ವಾರ ಹಿಮಾಚಲ ಪ್ರದೇಶದಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಕುರಿತ ಊಹಾಪೋಹಕ್ಕೆ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ತೆರೆ ಎಳೆದಿದ್ದಾರೆ.

ದ್ರಾವಿಡ್ ಅವರು ಮೇ 12-15 ರವರೆಗೆ ಹಿಮಾಚಲ ಪ್ರದೇಶದಲ್ಲಿ ನಡೆಯುವ ಬಿಜೆಪಿಯ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧಿವೇಶನದಲ್ಲಿ ಹಾಜರಾಗುತ್ತಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ವರದಿ ನಿಜವಲ್ಲ ಸುಳ್ಳು ಎಂದು ಸಮಜಾಯಿಷಿ ಕೊಟ್ಟಿದ್ದಾರೆ. ನಾನು ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡುತ್ತೇನೆ. ಮಾಧ್ಯಮದಲ್ಲಿ ಬಂದಿರುವ ವರದಿ ತಪ್ಪಾಗಿದೆ ಎಂದು ಹೇಳಿದ್ದಾರೆ.

ಮೇ 12 ರಿಂದ ಮೇ 15 ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧಿವೇಶನದಲ್ಲಿ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಧರ್ಮಶಾಲಾ ಶಾಸಕ ವಿಶಾಲ್ ನೆಹ್ರಿಯಾ ಹೇಳಿಕೊಂಡಿದ್ದರು. ಬಿಜೆಪಿ ಸಮಾರಂಭದ ವಿಚಾರ ತಿಳಿದ ದ್ರಾವಿಡ್ ಅಭಿಮಾನಿಗಳು, ಗಣ್ಯರು, ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...