ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಪ್ರಬಲ ಸಮರ್ಥಕರಾಗಿರುವ ನಟಿ ಕಂಗನಾ ರಣಾವತ್ ಇದೀಗ ತಾವು ರಾಜಕೀಯ ಪ್ರವೇಶಿಸುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಒಂದೊಮ್ಮೆ ಬಿಜೆಪಿ ತಮಗೆ ಟಿಕೆಟ್ ನೀಡಿದರೆ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಬಯಸಿರುವುದಾಗಿ ಹೇಳಿಕೊಂಡ ಕಂಗನಾ, ಈ ಮೂಲಕ ಜನಸೇವೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಆಟ ನಡೆಯುವುದಿಲ್ಲ. ಆಮ್ ಆದ್ಮಿ ಪಕ್ಷದ ಪೊಳ್ಳು ಭರವಸೆಗಳಿಗೆ ರಾಜ್ಯದ ಬುದ್ಧಿವಂತ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ.