alex Certify ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಂದೆ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಂದೆ ವಿಧಿವಶ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ನಿಧನರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. ಮೊದಲ ಬಾರಿಗೆ ಅಪ್ಪನಿಲ್ಲದೆ, ಲೋಕವನ್ನು ನಾನೆದುರಿಸಬೇಕಾಗಿದೆ. ಓಂಶಾಂತಿ ಅಣ್ಣ ಎಂದು ಬರೆದುಕೊಂಡಿದ್ದಾರೆ.

ಸಿ.ಟಿ. ರವಿ ಅವರ ತಂದೆ ತಿಮ್ಮೇಗೌಡ(92) ವಯೋ ಸಹಜ ಅನಾರೋಗ್ಯದಿಂದಾಗಿ ಇಂದು ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಭಾನುವಾರ ಅವರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಮೃತರಿಗೆ ಪತ್ನಿ ಹೊನ್ನಮ್ಮ, ಬಿಜೆಪಿ ನಾಯಕ ಸಿ.ಟಿ. ರವಿ ಸೇರಿದಂತೆ, ಸಿ.ಟಿ. ರಘು, ಪುತ್ರಿಯರಾದ ರೋಹಿಣಿ, ರೇವತಿ, ರೇಣುಕಾ ಇದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...