ಉತ್ತರ ಪ್ರದೇಶದ ಕುಶಿ ನಗರದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆಗೈದ ಆರೋಪದ ಅಡಿಯಲ್ಲಿ ತನಿಖೆ ನಡೆಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ.
ಬಿಜೆಪಿಯ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಹಾಗೂ ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ವಿಜಯೋತ್ಸವದಲ್ಲಿಯೂ ಭಾಗಿಯಾಗಿದ್ದ ಉತ್ತರ ಪ್ರದೇಶದ ಕುಶಿ ನಗರದ 25 ವರ್ಷದ ಮುಸ್ಲಿಂ ವ್ಯಕ್ತಿ ಬಾಬರ್ ಅಲಿ ಮೇಲೆ ನೆರೆ ಹೊರೆಯವರು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆತ ನಿನ್ನೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾರ್ಚ್ 20ರಂದು ಬಾಬರ್ ಅಲಿ ಮೇಲೆ ಕಥರಗರ್ಹಿಯಲ್ಲಿ ಹಲ್ಲೆ ನಡೆಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಬರ್ ಅಲಿಯನ್ನು ಲಖನೌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಬರ್ ನಿನ್ನೆ ಸಾವನ್ನಪ್ಪಿದ್ದ ಎನ್ನಲಾಗಿದೆ.