ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಿಜೆಪಿ ನಾಯಕರ ವಿರುದ್ಧ ಮತ್ತೆ ಗುಡುಗಿದ್ದಾರೆ. ಅವರುಗಳಿಗೆ ಹಿಂದುತ್ವಕ್ಕೆ ದುಡಿದವರು ಬೇಕಾಗಿಲ್ಲ. ರೌಡಿಗಳು ಸಾಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಹನುಮ ವ್ರತದ ಹಿನ್ನೆಲೆಯಲ್ಲಿ ಅಂಜನಾದ್ರಿಗೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ತ್ಯಾಗ, ಬಲಿದಾನ ಮಾಡಿ ಶ್ರಮ ವಹಿಸಿ ದುಡಿದ ಕಾರ್ಯಕರ್ತರು ಬಿಜೆಪಿ ನಾಯಕರ ಕಣ್ಣಿಗೆ ಕಾಣುತ್ತಿಲ್ಲ. ಹಣ ಇದ್ದವರು, ರೌಡಿಗಳು, ಗೂಂಡಾಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಿಂದೂ ಸಂಘಟನೆಗಳ ಒಕ್ಕೂಟದಿಂದ 25 ಮಂದಿ ಅಭ್ಯರ್ಥಿಗಳು ಕಣಕ್ಕಿಳಿಯುವುದು ಖಚಿತ ಎಂದು ಹೇಳಿದ ಪ್ರಮೋದ್ ಮುತಾಲಿಕ್, ಈ ಪೈಕಿ ಐದು ಮಂದಿ ಸ್ವಾಮೀಜಿಗಳು ಸಹ ಇದ್ದಾರೆ ಎಂದು ತಿಳಿಸಿದರು.