ಮೈಸೂರು: ನಂಜನಗೂಡಿನ ಶಾಸಕ ಹರ್ಷವರ್ಧನ್ ಎದುರೇ ಬಿಜೆಪಿ ಕಾರ್ಯಕರ್ತರು ಹಾಗೂ ರಾಯಣ್ಣ ಬ್ರಿಗೇಡ್ ಮುಖಂಡರ ನಡುವೆ ಮಾರಾಮಾರಿ ನಡೆದಿದ್ದು, ರಾಯಣ್ಣ ಬ್ರಿಗೇಡ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ಸರ್ಕಾರಿ ಪದವಿಪೂರ್ವ ಮಹಿಳಾ ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ರಾಯಣ್ಣ ಬ್ರಿಗೇಡ್ ಮುಖಂಡನ ಮೇಲೆ ಹಲ್ಲೆ ನಡೆಸಿದ್ದಾರೆ. ಶಾಸಕರ ಜತೆ ರಾಯಣ್ಣ ಬ್ರಿಗೇಡ್ ಮುಖಂಡ ಪುಟ್ಟಸ್ವಾಮಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು ಪುಟ್ಟಸ್ವಾಮಿಯನ್ನು ಥಳಿಸಿದ್ದಾರೆ.
ಫೇಸ್ಬುಕ್ ಸ್ನೇಹಕ್ಕೆ 32 ಲಕ್ಷ ರೂ. ಕಳೆದುಕೊಂಡ ಶಿಕ್ಷಕಿ..!
ಘಟನೆ ನಡೆಯುತ್ತಿದ್ದಂತೆಯೇ ಶಾಸಕ ಹರ್ಷವರ್ಧನ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಾಗೂ ರಾಯಣ್ಣ ಬ್ರಿಗೇಡ್ ಮುಖಂಡರ ನಡುವಿನ ಸಂಘರ್ಷಕ್ಕೆ ಕಾರಣ ತಿಳಿದುಬಂದಿಲ್ಲ.