alex Certify ಬಿಜೆಪಿ ಸೇರ್ಪಡೆಗೊಂಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಎನ್. ಮಹೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸೇರ್ಪಡೆಗೊಂಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಎನ್. ಮಹೇಶ್

ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್ ಮಹೇಶ್ ಈಗಾಗಲೇ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಹುಜನ ಸಮಾಜ ಪಕ್ಷದಿಂದ ಆಯ್ಕೆಯಾಗಿದ್ದ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಹಿಂದೆಯೇ ಉಚ್ಚಾಟಿಸಿದ್ದು, ಅಂತಿಮವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮಹೇಶ್ ಅವರ ಬಿಜೆಪಿ ಸೇರ್ಪಡೆಗೆ ನಾಡಿನ ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರಾದರೂ ಅಂತಿಮವಾಗಿ ಮಹೇಶ್ ಬಿಜೆಪಿ ಸೇರ್ಪಡೆಗೊಂಡಿದ್ದು, ಬೆಂಬಲಿಗರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತಾವು ಬಿಜೆಪಿ ಸೇರಿದ ಹಿಂದಿನ ಕಾರಣವನ್ನು ಅವರು ಬಿಚ್ಚಿಟ್ಟಿದ್ದಾರೆ.

Big Breaking: ನೊಬೆಲ್ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿಗೆ 5 ವರ್ಷ ಜೈಲು

ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದ್ದ ಕಾರಣ ಆ ಪಕ್ಷ ಸೇರ್ಪಡೆಯಾಗಲು ನನಗೆ ಮನಸ್ಸಿರಲಿಲ್ಲ. ಬಹುಜನ ಸಮಾಜ ಪಕ್ಷದಿಂದ ನನ್ನನ್ನು ಉಚ್ಚಾಟಿಸಿದ ವೇಳೆ ಮತ್ತೆ ಕರೆಯಬಹುದು ಎಂದು ಎರಡು ವರ್ಷಗಳ ಕಾಲ ಕಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದರು.

ಅಲ್ಲದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದರು. ಜೊತೆಗೆ ಮೋದಿಯವರು ಪರಿಶಿಷ್ಟರ ಕಲ್ಯಾಣಕ್ಕಾಗಿ ಕೈಗೊಂಡಿರುವ ಯೋಜನೆಗಳ ಕಾರಣಕ್ಕೆ ಅಂತಿಮವಾಗಿ ನಾನು ಬಿಜೆಪಿ ಸೇರ್ಪಡೆಗೊಂಡೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...