ತಿರುವನಂತಪುರಂ: ಸದ್ಯ ʼದಿ ಕೇರಳ ಸ್ಟೋರಿʼ ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆಯಾದಾಗಿನಿಂದಲೂ ಸಖತ್ ವೈರಲ್ ಆಗೋದ್ರ ಜೊತೆಗೆ ಒಂದಿಷ್ಟು ಜನರ ವಿರೋಧಕ್ಕೂ ಕಾರಣವಾಗಿದೆ. ಕೇರಳವನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಕಾರಣದಿಂದ ಈ ಟೀಸರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಹೌದು, ಕೇರಳದಲ್ಲಿ 32 ಸಾವಿರ ಹುಡುಗಿಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಹಾಗೂ ಅವರನ್ನು ವಿದೇಶಕ್ಕೆ ಕಳಿಸಿ ಭಯೋತ್ಪಾದಕ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂಬ ಸಂಭಾಷಣೆ ಇದೀಗ ವಿರೋಧಕ್ಕೆ ಕಾರಣವಾಗಿದೆ.
ಹೀಗಾಗಿ ಈ ಸಿನಿಮಾ ಬಿಡುಗಡೆ ಮಾಡಬಾರದು ಎಂದು ಕೇರಳ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ಒತ್ತಾಯಿಸಿದ್ದಾರೆ. ಸೂಕ್ತ ತನಿಖೆ ನಡೆಸುವಂತೆ ಕೇರಳ ಪೊಲೀಸ್ ಮಹಾ ನಿರ್ದೇಶಕ ಅನಿಲ್ ಕಾಂತ್ ಆದೇಶಿಸಿದ್ದಾರೆ.
ಇನ್ನು ಈ ಸಿನಿಮಾದಲ್ಲಿ ಖ್ಯಾತ ನಟಿ ಅದಾ ಶರ್ಮಾ ನಟಿಸಿದ್ದಾರೆ. ಅಮೃತ ಲಾಲ್ ಶಾ ʼದಿ ಕೇರಳ ಸ್ಟೋರಿʼ ನಿರ್ಮಾಣ ಮಾಡಿದ್ದಾರೆ. ಸದ್ಯ ಬಿಡುಗಡೆಗೆ ಸಿದ್ಧವಾಗುತ್ತಿರುವ ಈ ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಟೀಸರ್ ಮೂಲಕವೇ ವಿವಾದ ಸೃಷ್ಟಿ ಮಾಡಿರುವ ಈ ಸಿನಿಮಾ ಬಿಡುಗಡೆ ವೇಳೆ ಇನ್ನೆಷ್ಟು ವಿವಾದ ಎಬ್ಬಿಸುತ್ತೋ ಗೊತ್ತಿಲ್ಲ.