
ನವೆಂಬರ್ 25ಕ್ಕೆ ಬಿಡುಗಡೆಯಾಗಬೇಕಿದ್ದ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಇದೀಗ ಡಿಸೆಂಬರ್ 2 ಕ್ಕೆ ತೆರೆಕಾಣಲಿದೆ. ಕಾರಣಾಂತರದಿಂದ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ಶ್ರೀಧರ್ ಶಣ್ಮುಖ ನಿರ್ದೇಶನದ ಈ ಚಿತ್ರದಲ್ಲಿ ಐಶಾನಿ ಶೆಟ್ಟಿ ಸೇರಿದಂತೆ ನವೀನ್ ಶಂಕರ್, ಸಿದ್ದು ಮೂಲಿಮನಿ, ಯಶ್ ಶೆಟ್ಟಿ, ಜಯಶ್ರೀ ಆರಾಧ್ಯ, ನಿತೀಶ್ ಮಹಾನ್ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ. ಬಾಕ್ಸ್ ಆಫೀಸ್ ಕ್ರಿಯೇಶನ್ಸ್ ಲಾಂಛನದಲ್ಲಿ ಓಂಕಾರ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಕಾರ್ತಿಕ್ ಚಿಣ್ಣೋಜಿರಾವ್ ಸಂಗೀತ ಸಂಯೋಜನೆ ನೀಡಿದ್ದಾರೆ.
