alex Certify ಬಿರು ಬಿಸಿಲಿಗೆ ತತ್ತರಿಸಿದ ಪಶ್ಚಿಮ ಬಂಗಾಳ; ಶಾಲಾ – ಕಾಲೇಜುಗಳಿಗೆ ಒಂದು ವಾರ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರು ಬಿಸಿಲಿಗೆ ತತ್ತರಿಸಿದ ಪಶ್ಚಿಮ ಬಂಗಾಳ; ಶಾಲಾ – ಕಾಲೇಜುಗಳಿಗೆ ಒಂದು ವಾರ ರಜೆ

ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳು ಬಿರು ಬಿಸಿಲಿನಿಂದ ತತ್ತರಿಸಿ ಹೋಗಿವೆ. ಅದರಲ್ಲೂ ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು, ಕಾರ್ಯಕರ್ತರು ರಣಬಿಸಿಲಿನ ಮಧ್ಯೆ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ಜನತೆ ಸಹ ಬೇಸಿಗೆಯ ಬೇಗೆಗೆ ಕಂಗಾಲಾಗಿ ಹೋಗಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ವಾರಗಳ ಕಾಲ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದ್ದು, ಅಲ್ಲದೆ ರಾಜ್ಯದ ಜನತೆ ಆದಷ್ಟು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆವರೆಗೆ ಹೊರಗೆ ತಿರುಗಾಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...