alex Certify ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆಗೆ ಆಕ್ಷೇಪದ ಮಧ್ಯೆ ಮತ್ತೊಂದು ವಿವಾದಾತ್ಮಕ ಹೇಳಿಕೆ: ಅಪರಾಧಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರು ಎಂದ ಬಿಜೆಪಿ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆಗೆ ಆಕ್ಷೇಪದ ಮಧ್ಯೆ ಮತ್ತೊಂದು ವಿವಾದಾತ್ಮಕ ಹೇಳಿಕೆ: ಅಪರಾಧಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರು ಎಂದ ಬಿಜೆಪಿ ಶಾಸಕ

ಗೋಧ್ರೋತ್ತರ ಹಿಂಸಾಚಾರ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರವೆಸಗಿ, ಹಲವರನ್ನು ಹತ್ಯೆಗೈದಿದ್ದ ಆರೋಪದ ಮೇಲೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿತ್ತು.

ಇದಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದರ ಮಧ್ಯೆ ಇದೀಗ ಗುಜರಾತ್ ಬಿಜೆಪಿ ಶಾಸಕರೊಬ್ಬರು ನೀಡಿರುವ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಬಿಲ್ಕಿಸ್ ಭಾನು ಅತ್ಯಾಚಾರ ಪ್ರಕರಣದ ಕೆಲವು ಅಪರಾಧಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರಾಗಿದ್ದಾರೆ ಎಂದು ಗೋಧ್ರಾದ ಬಿಜೆಪಿ ಶಾಸಕ ಸಿ.ಕೆ. ರೌಲ್ ಜಿ ಹೇಳಿದ್ದಾರೆ.

ಮಹತ್ವದ ಸಂಗತಿ ಎಂದರೆ ಜೈಲಿನಲ್ಲಿದ್ದ ಅಪರಾಧಿಗಳನ್ನು ಬಿಡುಗಡೆ ಮಾಡುವುದಕ್ಕೆ ಶಿಫಾರಸ್ಸು ಮಾಡಲು ಸರ್ಕಾರ ನೇಮಿಸಿದ್ದ ಸಮಿತಿಯಲ್ಲಿ ಈ ಶಾಸಕರೂ ಸಹ ಇದ್ದರು. ಆದರೆ ಅಪರಾಧಿಗಳ ಬಿಡುಗಡೆ ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...