
ಬೀದರ್: ಬಿಸಿಯೂಟ ಸೇವನೆ ಮಾಡಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹುಮ್ನಾಬಾದ್ ನಲ್ಲಿ ನಡೆದಿದೆ.
ಇಲ್ಲಿನ ನಿಂಬೂರು ಸರಕಾರಿ ಶಾಲೆ ಹಾಗೂ ನಿಂಬೂರು ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.