alex Certify ಬಿಸಿಲಿನ ಝಳ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ‘ಸುತ್ತೋಲೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಲಿನ ಝಳ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ‘ಸುತ್ತೋಲೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಚುನಾವಣಾ ಕಾವು ಹೆಚ್ಚಾಗಿದೆ. ಇದರ ಜೊತೆ ಜೊತೆಗೆ ಬೇಸಿಗೆ ಝಳ ಕೂಡಾ ಹೆಚ್ಚಳವಾಗುತ್ತಿದ್ದು, ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು ಪ್ರಚಾರ ಕಾರ್ಯಕ್ಕೆ ತೆರಳಲು ಹಿಂದೇಟು ಹಾಕುವಂತಾಗಿದೆ. ಆದರೆ ಅನಿವಾರ್ಯವಾಗಿರುವ ಕಾರಣ ಆದಷ್ಟು ಬೆಳಗಿನ ಜಾವ ಹಾಗೂ ಸಂಜೆ ಪ್ರಚಾರ ಮಾಡಲು ಒತ್ತು ನೀಡುತ್ತಿದ್ದಾರೆ.

ಇದರ ಮಧ್ಯೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಸಹ ಆಯೋಜಿಸಲಾಗುತ್ತಿದ್ದು, ದೊಡ್ಡ ದೊಡ್ಡ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ಕೆ ಬರುವ ಕಾರಣ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರದಲ್ಲಿ ಬಿಸಿಲಿನ ತೀವ್ರತೆಗೆ ಕೆಲವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ.

ಹೊರಾಂಗಣ ಪ್ರದೇಶದಲ್ಲಿ ಸಭೆ – ಸಮಾರಂಭ ಆಯೋಜಿಸುವುದನ್ನು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಆದಷ್ಟು ತಪ್ಪಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದ್ದು, ಒಂದೊಮ್ಮೆ ಕಾರ್ಯಕ್ರಮ ಅನಿವಾರ್ಯವಾದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆ ನೀಡಲು ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು. ಜೊತೆಗೆ ಉತ್ತಮ ಗಾಳಿ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಸಭಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...