alex Certify ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್​ ಸೋಂಕಿಗೆ ಒಳಗಾಗಿರುವ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಬಳಿಕ ಮುಂದಿನ 2 ವಾರಗಳವರೆಗೆ ಹೋಂ ಐಸೋಲೇಷನ್​ನಲ್ಲಿ ಇರಲಿದ್ದಾರೆ. ಈ ಅವಧಿಯಲ್ಲಿ ಗಂಗೂಲಿಯವರ ಆರೋಗ್ಯದ ಮೇಲ್ವಿಚಾರಣೆಯನ್ನು ವೈದ್ಯರೇ ನೋಡಿಕೊಳ್ಳಲಿದ್ದಾರೆ. ಅಲ್ಲದೇ ಗಂಗೂಲಿಗೆ ಓಮಿಕ್ರಾನ್​ ರೂಪಾಂತರಿ ತಗುಲಿಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಇಂದು ಮಧ್ಯಾಹ್ನ ನಾವು ಸೌರವ್​ ಗಂಗೂಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಿದ್ದೇವೆ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿ ಹದಿನೈದು ದಿನಗಳ ಕಾಲ ಹೋಂ ಐಸೋಲೇಷನ್​ನಲ್ಲಿ ಇರಲಿದ್ದಾರೆ. ಬಳಿಕ ಅವರಿಗೆ ಮುಂದಿನ ಚಿಕಿತ್ಸೆಯ ಹಂತವನ್ನು ನಿರ್ಧರಿಸುತ್ತೇವೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

49 ವರ್ಷದ ಸೌರವ್​ ಗಂಗೂಲಿಗೆ ಆರ್​​ ಟಿ ಪಿ ಸಿ ಆರ್​ ಪರೀಕ್ಷೆಯಲ್ಲಿ ಕೋವಿಡ್​ ಪಾಸಿಟಿವ್​ ಎಂದು ವರದಿ ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಕೊಲ್ಕತ್ತಾದ ವುಡ್​ಲ್ಯಾಂಡ್ಸ್​ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಲ್ಲಿ ಅವರಿಗೆ ಮೊನೊಕ್ಲೋನಲ್​ ಆ್ಯಂಟಿಬಾಡಿ ಕಾಕ್ಟೈಲ್​ ಥೆರಪಿ ನೀಡಲಾಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...