alex Certify ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಗೆ ಕೋವಿಡ್​ ಸೋಂಕು..! ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಗೆ ಕೋವಿಡ್​ ಸೋಂಕು..! ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್​ ಸೌರವ್​ ಗಂಗೂಲಿ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದಾರೆ. ಕೋವಿಡ್​ ಪಾಸಿಟಿವ್​ ವರದಿ ಬರುತ್ತಿದ್ದಂತೆಯೇ ಅವರನ್ನು ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಸೌರವ್​ ಗಂಗೂಲಿ ಡಬಲ್​ ಡೋಸ್​ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಆದರೆ ವೃತ್ತಿಪರ ಕಾರ್ಯಗಳ ನಿಮಿತ್ತ ಗಂಗೂಲಿ ವ್ಯಾಪಕವಾಗಿ ಪ್ರಯಾಣ ಮಾಡುತ್ತಿದ್ದರು. ಆರ್​ಟಿ ಪಿಸಿಆರ್​ ವರದಿ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೋಮವಾರ ರಾತ್ರಿ 49 ವರ್ಷದ ಸೌರವ್​ ಗಂಗೂಲಿಯನ್ನು ವುಡ್​ಲ್ಯಾಂಡ್ಸ್​​ ನರ್ಸಿಂಗ್​​ ಹೋಮ್​​ಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.

ಈ ವರ್ಷದಲ್ಲಿ ಈಗಾಗಲೇ ಗಂಗೂಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಲು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಸೌರವ್​ ಗಂಗೂಲಿ ಸಹೋದರ ಸ್ನೇಹಾಶಿಷ್​​ ಗಂಗೂಲಿ ಸಹ ಕೋವಿಡ್​ ಸೋಂಕಿಗೆ ಒಳಗಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...