alex Certify ಬಿಸಿ ನೀರು ಕುಡಿಯುವುದರಿಂದ ಕಡಿಮೆಯಾಗುತ್ತಾ ಕೊಲೆಸ್ಟ್ರಾಲ್….? ಅಪಾಯ ಹೆಚ್ಚಾಗುವ ಮುನ್ನ ಸತ್ಯ ತಿಳಿದುಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿ ನೀರು ಕುಡಿಯುವುದರಿಂದ ಕಡಿಮೆಯಾಗುತ್ತಾ ಕೊಲೆಸ್ಟ್ರಾಲ್….? ಅಪಾಯ ಹೆಚ್ಚಾಗುವ ಮುನ್ನ ಸತ್ಯ ತಿಳಿದುಕೊಳ್ಳಿ 

ಕೊಲೆಸ್ಟ್ರಾಲ್‌ ಕೂಡ ನಮ್ಮ ಆರೋಗ್ಯಕ್ಕೆ ಮಾರಕವಾಗಬಲ್ಲ ಸಮಸ್ಯೆಗಳಲ್ಲೊಂದು. ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತವಾಗುವ ಅಪಾಯ ಕೂಡ ಇರುತ್ತದೆ. ಹಾಗಾಗಿ ದೇಹದಲ್ಲಿ ಕೊಲೆಸ್ಟ್ರಾಲ್‌ ಹೆಚ್ಚಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ.

ಪ್ರತಿದಿನ ಬಿಸಿನೀರು ಕುಡಿಯುವುದರಿಂದ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್‌ ಕಡಿಮೆಯಾಗುತ್ತದೆ ಎಂಬ ನಂಬಿಕೆ ಹಲವರಲ್ಲಿದೆ. ಇದು ಸತ್ಯವೇ? ಅಥವಾ ಬಿಸಿನೀರಿಗೂ ಕೊಲೆಸ್ಟ್ರಾಲ್‌ಗೂ ಯಾವುದೇ ಸಂಬಂಧವಿಲ್ಲವೇ ಎಂಬುದನ್ನು ತಿಳಿದುಕೊಳ್ಳೋಣ.

ಬಿಸಿನೀರು ಕುಡಿಯುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಇದು ಹೊಟ್ಟೆಯ ಕೊಬ್ಬನ್ನು ಸಹ ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕೂಡ ಕಡಿಮೆ ಮಾಡುತ್ತದೆ. ಅನೇಕ ಸಂಶೋಧನೆಗಳಲ್ಲಿ ಇದು ದೃಢಪಟ್ಟಿದೆ. ಆದರೆ ಗಂಭೀರ ಕಾಯಿಲೆಗಳಿದ್ದರೆ, ಬೇರೆ ಬೇರೆ ತೆರನಾದ ಆರೋಗ್ಯ ಸಮಸ್ಯೆಗಳಿದ್ದರೆ ಬಿಸಿನೀರು ಕುಡಿಯುವ ಮೊದಲು ಒಮ್ಮೆ ವೈದ್ಯರನ್ನು ಸಂಪರ್ಕಿಸಬೇಕು.

ಪ್ರತಿದಿನ ಉಗುರು ಬೆಚ್ಚಗಿನ ನೀರನ್ನು ಎಲ್ಲರೂ ಕುಡಿಯಬಹುದು. ಅದಕ್ಕೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡಲು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 2 ಚಮಚ ಜೇನುತುಪ್ಪದೊಂದಿಗೆ ಬೆಚ್ಚಗಿನ ನೀರನ್ನು ಕುಡಿಯಬಹುದು. ಬಿಸಿ ನೀರಿಗೆ ಜೇನುತುಪ್ಪ ಬೆರೆಸಿ ಸೇವನೆ ಮಾಡಿದ್ರೆ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ. ಇದು ನಿಮ್ಮ ತೂಕವನ್ನು ಸಹ ನಿಯಂತ್ರಣದಲ್ಲಿಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...