ಬೆಂಗಳೂರು: ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸೇರಿ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.
ದೇಶದ ಯಾವ ರಾಜ್ಯದ ಶಾಸಕರಿಗೆ ಸಿಗುತ್ತೆ ಅತಿ ಹೆಚ್ಚು ಸಂಭಾವನೆ..? ಇಲ್ಲಿದೆ ಮಾಹಿತಿ
ಮಾಜಿ ಸಿಎಂ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಹಾಗೂ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್. ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್. ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಅವರ ಹುದ್ದೆಗಳನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.