ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುತ್ತದೆ ಎಂದು ಭಾವಿಸಲಾಗಿತ್ತಾದರೂ ಬಳಿಕ ಅವರು ಅವಕಾಶದಿಂದ ವಂಚಿತರಾಗಿದ್ದರು.
ಅವರು ವಿಧಾನಪರಿಷತ್ ಸದಸ್ಯರಾಗಿ ಬಳಿಕ ಮಂತ್ರಿಯಾಗಲಿದ್ದಾರೆ ಎಂಬ ನಿರೀಕ್ಷೆ ಹೊಂದಿದ್ದ ಬಿ.ವೈ. ವಿಜಯೇಂದ್ರ ಅವರ ಅಭಿಮಾನಿಗಳು ನಿರಾಸೆಗೊಂಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು.
ಇದೀಗ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಕೆ.ಸಿ. ನಾರಾಯಣ ಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ, ಮುಂದಿನ ಮುಖ್ಯಮಂತ್ರಿ ಆಗುವ ಎಲ್ಲಾ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ವಿಜಯೇಂದ್ರ ಅಭಿಮಾನಿಗಳು ಸಹ ಮುಂದಿನ ಸಿಎಂ ಅವರೇ ಎಂದು ಕೂಗಿದ್ದಾರೆ.