ರಾಜ್ಯದಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು ರೈತರು ಭೂಮಿ ಹದ ಮಾಡಿಕೊಂಡು ಬೀಜ ಬಿತ್ತನೆ ಮಾಡಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೃಷಿಗೆ ಪೂರಕ ವಾತಾವರಣವಿರುವ ಕಾರಣ ಈ ಬಾರಿ ಉತ್ತಮ ಫಸಲು ಸಿಗಬಹುದೆಂಬ ನಿರೀಕ್ಷೆ ರೈತರಲ್ಲಿದೆ.
ಕೊಪ್ಪಳ, ಗದಗ, ವಿಜಯನಗರ ಜಿಲ್ಲೆಗಳಲ್ಲಿ ರಸ ಗೊಬ್ಬರ ಖರೀದಿಗಾಗಿ ರೈತರು ಮುಗಿಬಿದ್ದಿದ್ದು, ಸರದಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಲಭ್ಯವಿಲ್ಲವೆಂದು ಹೇಳಲಾಗಿದ್ದು, ಹೀಗಾಗಿ ರೈತರು ಹೆಚ್ಚಿನ ಬೆಲೆಗೆ ರಸಗೊಬ್ಬರ ಖರೀದಿ ಮಾಡುವಂತಾಗಿದೆ.
ರಸಗೊಬ್ಬರ ಕೊರತೆ ಎದುರಾಗುವುದಿಲ್ಲ. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಿದ್ದರೂ ಸಹ ಅಗತ್ಯ ಪ್ರಮಾಣದಲ್ಲಿ ಲಭ್ಯವಾಗುತ್ತಿಲ್ಲ. ಹೀಗಾಗಿ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲು ರೈತರು ಆಗ್ರಹಿಸಿದ್ದಾರೆ.