ದೇಶ ಹಾಗೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂಬ ದೂರು ಕೇಳಿ ಬರುತ್ತಲೇ ಇರುತ್ತದೆ. ಅಲ್ಲದೆ ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳು ಮಾರಣಾಂತಿಕವಾಗಿ ದಾಳಿ ಮಾಡಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಮಧ್ಯೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಮಹತ್ವದ ಸೂಚನೆಯೊಂದನ್ನು ನೀಡಿದೆ. ಬೀದಿ ನಾಯಿಗಳ ಆರೈಕೆದಾರರು ಹಾಗೂ ಆಹಾರ ನೀಡುವವರಿಗೆ ಯಾವುದೇ ರೀತಿಯ ಕಿರುಕುಳ ಅಥವಾ ತೊಂದರೆ ನೀಡಬಾರದು ಎಂದು ತಿಳಿಸಿದೆ.
ಬೀದಿ ನಾಯಿಗಳೂ ಸೇರಿದಂತೆ ಪ್ರಾಣಿಗಳ ಆರೈಕೆ ಮಾಡುವುದು, ಆಹಾರ ನೀಡುವುದು ಹಾಗೂ ಕರುಣೆ ತೋರುವುದು ಸಂವಿಧಾನದ ಪ್ರಕಾರ ನಾಗರೀಕರ ಜವಾಬ್ದಾರಿಯಾಗಿದ್ದು, ಪ್ರಾಣಿಗಳ ಮೇಲಿನ ದೌರ್ಜನ್ಯ, ಶಿಕ್ಷಾರ್ಹ ಮತ್ತು ದಂಡಾರ್ಹ ಅಪರಾಧವಾಗಿದೆ ಎಂದು ಹೇಳಿದೆ.
ಪ್ರಾಣಿಗಳ ಮೇಲಿನ ದೌರ್ಜನ್ಯದ ಕುರಿತು ಯಾವುದೇ ದೂರುಗಳಿದ್ದಲ್ಲಿ ಪೊಲೀಸ್ ಕಂಟ್ರೋಲ್ ರೂಂ 112 ಅಥವಾ ಪಶು ಸಂಗೋಪನಾ ಸಹಾಯವಾಣಿ ಸಂಖ್ಯೆ 8277100200 ಸಂಪರ್ಕಿಸಬಹುದಾಗಿದೆ.