ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮಕ್ಕಳು ಪ್ರಾಣ ಕಳೆದುಕೊಂಡಿರುವ ಹಲವು ಘಟನೆಗಳನ್ನು ಕೇಳಿದ್ದೇವೆ, ನೋಡಿದ್ದೇವೆ. ಬೀದಿ ನಾಯಿಗಳ ದಾಳಿಗೆ ದೊಡ್ಡವರು ಸಹ ಹೊರತಾಗಿಲ್ಲ. ಇದೀಗ ಹೈಕೋರ್ಟ್ ಈ ಕುರಿತಂತೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಬೀದಿ ನಾಯಿಗಳ ದಾಳಿಯಿಂದ ಯಾರಾದರೂ ನಾಗರಿಕರು ಗಾಯಗೊಂಡರೆ ಅಥವಾ ಸಾವಿಗೀಡಾದರೆ ಅಂತಹ ಸಂದರ್ಭಗಳಲ್ಲಿ ಆಯಾ ಸ್ಥಳೀಯ ಹೋರಾಡಳಿತ ಸಂಸ್ಥೆಗಳೇ ಹೊಣೆಯಾಗುತ್ತವೆ ಎಂದು ಹೈಕೋರ್ಟಿನ ಧಾರವಾಡ ಪೀಠ ತಿಳಿಸಿದೆ.
ಹೀಗಾಗಿ ಸ್ಥಳೀಯ ಪೌರಾಡಳಿತ ಸಂಸ್ಥೆಗಳೇ ಪರಿಹಾರ ನೀಡಬೇಕಾಗುತ್ತದೆ ಎಂದು ಆದೇಶಿಸಿರುವ ಹೈಕೋರ್ಟ್, ಬೀದಿ ನಾಯಿಗಳ ದಾಳಿಯಿಂದ ಸಾವನ್ನಪ್ಪಿದ್ದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಪಾವತಿಸುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ.