ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ವಿವಿಧೆಡೆಗಳಲ್ಲಿ ಕನಿಷ್ಟ ಆರು ಮಕ್ಕಳ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ಜನರು ಪದೇ ಪದೇ ದೂರು ನೀಡುತ್ತಿದ್ದಾರೆ.
ಗಾಯಗೊಂಡ ಎಲ್ಲಾ ಮಕ್ಕಳನ್ನು ಹಿಂಗೋಳಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಮಗುವನ್ನು ನಾಂದೇಡ್ ಜಿಲ್ಲೆಯ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಬೀದಿ ನಾಯಿಗಳ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿದೆ. ಹಿಂಗೋಲಿಯಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಲು ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.