alex Certify ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತಿದ್ದಕ್ಕೆ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತಿದ್ದಕ್ಕೆ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಮಹಿಳೆ

ಬೆಳಗಾವಿ : ಪತಿಯ ಹಿಂಸೆ ತಾಳಲಾರದೆ ಪತ್ನಿಯೊಬ್ಬರು ತನ್ನ ಬುದ್ಧಿಮಾಂದ್ಯ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ ಗ್ರಾಮದಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಗೆ ಬುದ್ಧಿ ಮಾಂದ್ಯ ಮಕ್ಕಳು ಹುಟ್ಟಿದ್ದರು. ಹೀಗಾಗಿ ಪತಿ ಪ್ರತಿ ದಿನ ಹಿಂಸೆ ನೀಡುತ್ತಿದ್ದ ಎಂಬ ಕಾರಣಕ್ಕೆ ಕೆರೆಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಹಿಳೆ ಬುದ್ಧಿ ಮಾಂದ್ಯ ಮಕ್ಕಳನ್ನು ಹೆತ್ತಿದ್ದಕ್ಕೆ ಪತಿಯಿಂದ ಪ್ರತಿದಿನವೂ ಹಿಂಸೆ ಅನುಭವಿಸುತ್ತಿದ್ದರು. ಗುರುವಾರ ಕೂಡ ಮನೆಗೆ ಆಗಮಿಸಿದ್ದ ಆತ, ಪತ್ನಿ ಹಾಗೂ ಮಗನ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೇ, ನನ್ನನ್ನು ಬಿಟ್ಟು ಹೋಗು, ಇನ್ನೊಂದು ಮದುವೆಯಾಗುತ್ತೇನೆ ಎಂದು ಹೇಳಿದ್ದಾನೆ.

ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೇವಂತಿ ಪ್ಯಾಟಿ(43), ಮಹಾಂತೇಶ್ ಪ್ಯಾಟಿ(12) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಸೇವಂತಿ ತನ್ನ ಇನ್ನೊಬ್ಬ ಮಗನನ್ನು, ಗಂಡನ ಕಿರುಕುಳದಿಂದಾಗಿ ತಮ್ಮ ತವರು ಮನೆಯಲ್ಲಿಯೇ ಬಿಟ್ಟಿದ್ದರು. ಹೀಗಾಗಿ ಆ ಮಗು ಬದುಕುಳಿದಿದೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ. ಅಲ್ಲದೇ, ಪತಿಯೇ ಕೊಲೆ ಮಾಡಿದ್ದಾನೆ ಎಂದು ಸೇವಂತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...