alex Certify ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯನ್ನೇ ಕೊಚ್ಚಿ ಕೊಲೆಗೈದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯನ್ನೇ ಕೊಚ್ಚಿ ಕೊಲೆಗೈದ ಯುವಕ

ಹಾಸನ: ಮದ್ಯ ಮಾರಾಟ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಯುವಕ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ.

ಸೋಮಣ್ಣ (50) ಹತ್ಯೆಯಾದ ವ್ಯಕ್ತಿ. ಯಶವಂತ್ ಎಂಬ ಯುವಕ ಮದ್ಯ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ. ಇದಕ್ಕೆ ಸೋಮಣ್ಣ ಇಂತಹ ಕೆಲಸ ಮಾಡದಂತೆ ಬುದ್ಧಿ ಹೇಳಿದ್ದರು ಎನ್ನಲಾಗಿದೆ. ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ಯುವಕ ಕೊಡಲಿಯಿಂದ ಕೊಚ್ಚಿ ಸೋಮಣ್ಣನನ್ನು ಹತ್ಯೆಗೈದಿದ್ದಾನೆ.

ಆರೋಪಿ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಳೆಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...