ಬುರ್ಖಾದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್ 28-02-2022 1:08PM IST / No Comments / Posted In: Latest News, India, Live News ತೆಲಂಗಾಣದ ಶಂಶಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಪೊಲೀಸರು ಬರೋಬ್ಬರಿ 18 ಲಕ್ಷ ರೂಪಾಯಿ ಬೆಲೆಬಾಳುವ 350 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಚಾಲಾಕಿ ಮಹಿಳೆಯು ಭರ್ಜರಿ ಪ್ಲಾನ್ ಮಾಡಿದ್ದಳು ಎನ್ನಲಾಗಿದೆ. ಚಿನ್ನದ ಮಣಿಗಳನ್ನು ರೇಡಿಯಂ ಲೇಪಿತ ಬುರ್ಖಾದ ಮೇಲೆ ಹೊಲಿಯಲಾಗಿತ್ತು. ವಶಪಡಿಸಿಕೊಳ್ಳಲಾದ ಚಿನ್ನದ ಮಣಿಯು 350 ಗ್ರಾಂ ತೂಕವನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಮುಂದಾದ ದುಬೈ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.