ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ ವ್ಯಾಪಿಸಿದ್ದರಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ ನಲ್ಲಿದ್ದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು ಮತ್ತು ಸಹಾಯಕ ಸೇರಿ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕೊಟ್ಟೂರು ಸಮೀಪದ ಕೆ. ಅಯ್ಯನಹಳ್ಳಿಯಲ್ಲಿ ಗುರುವಾರ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿ ಇದ್ದ ಎಲ್ಲಾ ಮಕ್ಕಳು, ಶಿಕ್ಷಕರು ಪಾರಾಗಿದ್ದಾರೆ,

ತರಳಬಾಳು ಶಾಲೆಗೆ ಸೇರಿದ ಬಸ್ ಅಂಬಳಿ, ಹರಾಳು ಕ್ರಾಸ್, ಕೋಗಳಿ, ಬೆಣ್ಣಿಹಳ್ಳಿ ಗ್ರಾಮಗಳಿಂದ ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಕರೆತರುತ್ತಿತ್ತು. ಕೆ. ಅಯ್ಯನಹಳ್ಳಿ ಸಮೀಪ ಬಸ್ ಇಂಜಿನ್ ನಲ್ಲಿ ಹೊಗೆ, ಸುಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಬಸವರಾಜ್ ತಕ್ಷಣವೇ ರಸ್ತೆ ಬದಿಗೆ ಬಸ್ ನಿಲ್ಲಿಸಿ ಪರಿಶೀಲಿಸಿದ್ದಾರೆ. ಅಪಾಯದ ಮುಂಜಾಗ್ರತೆ ಅರಿತು ಬಸ್ ನಲ್ಲಿದ್ದ ಎಲ್ಲರನ್ನೂ ಕೆಳಗೆ ಇಳಿಸಿ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ. ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read