ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮುಂದಿನ ಕೆಲವೇ ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜಧಾನಿಯಲ್ಲಿ ವರುಣಾರ್ಭಟ ಹೆಚ್ಚಾಗಲಿದೆ ಎಂದು ತಿಳಿಸಿದೆ.
ಈಗಗಾಲೇ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.