
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ (ಮೇ 6) ಹಾಗೂ ಮೇ 7ರಂದು ಬೆಳಿಗ್ಗೆ ರಾಜಧಾನಿ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳು ಬಂದ್ ಆಗಲಿವೆ.
ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಒಟ್ಟು 34 ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ.
ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ 34 ರಸ್ತೆಗಳು ಬಂದ್ ಆಗಲಿವೆ. ರಾಜಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ಸರ್ಕಲ್, ಆರ್ ಬಿ ಐ ಲೇಔಟ್, ಜೆಪಿ ನಗರ, ಸಿರ್ಸಿ ಸರ್ಕಲ್, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್, ಆರ್ಮುಗಂ ಸರ್ಕಲ್, ಬುಲ್ ಟೆಂಪಲ್ ರೋಡ್, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿಆರ್ ಮಿಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಬಾಳೆಕಾಯಿ ಮಂಡಿ, ಕೆ.ಪಿ.ಅಗ್ರಹಾರ.
ಮಾಗಡಿ ರೋಡ್, ಚೇಳೂರು ಪಾಳ್ಯ ರೋಡ್, ಎಂ.ಸಿ. ಸರ್ಕಲ್, ವೆಸ್ಟ್ ಆಫ್ ಕಾರ್ಡ್ ರೋಡ್, ಎಂ ಸಿ ಲೇಔಟ್, ನಾಗರಭಾವಿ ಮುಖ್ಯ ರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಬಸವೇಶ್ವರ ನಗರ 8ನೇ ಮುಖ್ಯ ರಸ್ತೆ, ಶಂಕರಮಠ, ಮೋದಿ ಆಸ್ಪತ್ರೆ, ನವರಂಗ್ ರಸ್ತೆ, ಎಂ ಕೆಕೆ ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ ಹಾಗೂ ಸ್ಯಾಂಕಿ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.