ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಬಿರುಗಾಳಿ, ಆಲಿಕಲ್ಲು ಮಳೆ ಆರಂಭವಾಗಿದ್ದು, ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಹಲವೆಡೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಮಡಿವಾಳ, ಕೋರಮಂಗಲ, ಹೆಚ್ ಎಸ್ ಆರ್ ಲೇಔಟ್, ಸರ್ಜಾಪುರ, ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ಹಲವೆಡೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದರೆ ಆರ್.ಆರ್. ನಗರ, ಹೊಸಕೆರೆಹಳ್ಳಿ, ನಾಯಂಡಹಳ್ಳಿ ಸೇರಿದಂತೆ ಹಲವೆಡೆ ಬಿರುಗಾಳಿಗೆ ಜನರು ಕಂಗಾಲಾಗಿದ್ದಾರೆ.
ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.