alex Certify ಬೆಂಗಳೂರಿನಲ್ಲಿ ಹಗಲು ದರೋಡೆ; ಲಕ್ಷಾಂತರ ಮೌಲ್ಯದ ಚಿನ್ನ ಕದ್ದು ಎಸ್ಕೇಪ್ ಆದ ಕಳ್ಳ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಹಗಲು ದರೋಡೆ; ಲಕ್ಷಾಂತರ ಮೌಲ್ಯದ ಚಿನ್ನ ಕದ್ದು ಎಸ್ಕೇಪ್ ಆದ ಕಳ್ಳ…!

ಖತರ್ನಾಕ್ ಕಳ್ಳನೊಬ್ಬ ಹಗಲಿನಲ್ಲೇ ಮನೆಗೆ ನುಗ್ಗಿ ದರೋಡೆಗೈದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆಯ ಮುಂದೆಯೇ ಹೊಂಚು ಹಾಕಿ ನಿಂತಿದ್ದ ಆರೋಪಿ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ, ಹಾಡು ಹಗಲೇ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕದ್ದಿದ್ದಾನೆಂದು ತಿಳಿದು ಬಂದಿದೆ.

ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಳ್ಳತನ ಮಾಡಿದ ದುಷ್ಕರ್ಮಿ ಎಸ್ಕೇಪ್ ಆಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಫೆಬ್ರವರಿ 10 ನೇ ತಾರೀಖಿನಂದು ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿಯೇ ಇದ್ದ ಮಾಲೀಕರು ಅಗತ್ಯ ವಸ್ತುಗಳನ್ನ ಕೊಳ್ಳಲು,‌ ಮನೆ ಬಾಗಿಲನ್ನು ಮುಂದಕ್ಕೆ ಮಾಡಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಖದೀಮ ತನ್ನ ಕೈಚಳಕ ತೋರಿಸಿದ್ದಾನೆ.‌ ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿದ್ದ 1.80 ಲಕ್ಷ ಬೆಲೆಬಾಳುವ ಚಿನ್ನ, ಬೆಳ್ಳಿ ಹಾಗು ನಗದು ಕದ್ದು ಪರಾರಿ ಆಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮನೆ ಮಾಲೀಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ಎಫ್ಐಆರ್ ದಾಖಲಾಗಿದ್ದು, ತನಿಖೆ ಜಾರಿಯಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...