alex Certify ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ..!

ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ನಂದಿನಿ ಲೇಔಟ್ ಬಳಿಯ ನರಸಿಂಹಸ್ವಾಮಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ.

ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಕೊಲೆ ಮಾಡಲಾಗಿದೆ. ಆರೋಪಿ, ಆಟೋದಲ್ಲಿ ಮೃತರನ್ನ ಹಿಂಬಾಲಿಸಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ, ಬೆಳಗ್ಗೆ ಸುಮಾರು 10:10ಕ್ಕೆ ಈ ಘಟನೆ ನಡೆದಿದೆ ಎಂದು ನಂದಿನಿ ಲೇಔಟ್ ಪೊಲೀಸರು ಮಾಹಿತಿ ನೀಡಿದ್ದಾರೆ‌‌.

BIG NEWS: ವರ್ಷದ ಮೊದಲ ಉಡಾವಣೆಗೆ ಇಸ್ರೋ ಸಜ್ಜು, ರೇಡಾರ್‌ ಇಮೇಜಿಂಗ್ ಉಪಗ್ರಹ ಕಕ್ಷೆಗೆ ಸೇರಿಸಲು ಸಿದ್ಧತೆ

ಮೃತ ಯುವಕನನ್ನು ವಿಶ್ವ ಎಂದು ಗುರುತಿಸಲಾಗಿದೆ‌. ಆತ ಬೈಕ್ ನಲ್ಲಿ ಬರುವಾಗ ಆಟೋದಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದರಿಂದ, ತೀವ್ರವಾಗಿ ಗಾಯಗೊಂಡಿದ್ದ ವಿಶ್ವ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...