alex Certify ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್; ಮಾರ್ಚ್ 23ರಿಂದ ಆರಂಭವಾಗಲಿದೆ ಸಿನಿಮಾ ಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್; ಮಾರ್ಚ್ 23ರಿಂದ ಆರಂಭವಾಗಲಿದೆ ಸಿನಿಮಾ ಹಬ್ಬ

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 23ರಿಂದ 30 ರ ವರೆಗೆ ಇದು ನಡೆಯಲಿದೆ. ಈ ಸಂದರ್ಭದಲ್ಲಿ ರಾಜಾಜಿನಗರದಲ್ಲಿರುವ ಒರಿಯನ್ ಮಾಲ್ ನ 11 ಸ್ಕ್ರೀನ್ ಗಳಲ್ಲಿ 55 ದೇಶದ ಸಿನಿಮಾಗಳು ಸೇರಿದಂತೆ ಒಟ್ಟು 300 ಚಿತ್ರ ಪ್ರದರ್ಶನವಾಗುವ ಸಾಧ್ಯತೆ ಇದೆ.

ಬುಧವಾರದಂದು ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಲನಚಿತ್ರೋತ್ಸವ ಸಂಘಟನಾ ಸಮಿತಿ ಅಧ್ಯಕ್ಷರೂ ಆದ ಸಚಿವ ಆರ್. ಅಶೋಕ್ ಈ ಕುರಿತಂತೆ ಮಾಹಿತಿ ನೀಡಿದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚಲನಚಿತ್ರೋತ್ಸವ ಸಂದರ್ಭದಲ್ಲಿ ಪ್ರಥಮ ಪ್ರಶಸ್ತಿಯಾಗಿ 3 ಲಕ್ಷ ರೂಪಾಯಿ, ದ್ವಿತೀಯ 2 ಲಕ್ಷ ರೂಪಾಯಿ ಹಾಗೂ ತೃತೀಯ 1 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತಿದ್ದು, ಇದನ್ನು ಹೆಚ್ಚಳ ಮಾಡುವಂತೆ ಸಲಹೆ ನೀಡಲಾಗಿದೆ. ಜೊತೆಗೆ ಪ್ರಶಸ್ತಿ ವಿಜೇತ ಚಿತ್ರಗಳನ್ನು ಆಯ್ಕೆ ಮಾಡಲು ಅರ್ಹ, ಸಮರ್ಥರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...