alex Certify ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ‘ಸುಪ್ರೀಂ’ ಬ್ರೇಕ್; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಣೆಗೆ ‘ಹೈಕೋರ್ಟ್’ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ‘ಸುಪ್ರೀಂ’ ಬ್ರೇಕ್; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಣೆಗೆ ‘ಹೈಕೋರ್ಟ್’ ಗ್ರೀನ್ ಸಿಗ್ನಲ್

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ತ್ರಿ ಸದಸ್ಯ ಪೀಠ ಬ್ರೇಕ್ ಹಾಕಿದ್ದು, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ. ಇದರ ಮಧ್ಯೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿದ್ದು, ಅದ್ದೂರಿ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇದರಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಇನ್ನು ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಿರುವ ಸುಪ್ರೀಂ ಕೋರ್ಟ್, ಜಾಗದ ಕುರಿತ ವಿವಾದವನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿದೆ. ಹೀಗಾಗಿ ಮುಂದೆ ಯಾವ ತೀರ್ಮಾನ ಹೊರಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...