ರಾಜ್ಯ ರಾಜಧಾನಿ ಬೆಂಗಳೂರಿಗೆ ಉದ್ಯೋಗ ಅರಸಿ ದೇಶದ ವಿವಿಧ ಭಾಗಗಳಿಂದ ಜನರು ಬರುತ್ತಾರೆ. ರಾತ್ರಿ ಪಾಳಿಯಲ್ಲೂ ಸಹ ಲಕ್ಷಾಂತರ ಮಂದಿ ಕೆಲಸ ಮಾಡುತ್ತಾರೆ. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ನಿಗದಿತ ಅವಧಿ ಮೀರಿದ ಬಳಿಕ ಹೋಟೆಲ್ ಗಳು ಬಂದ್ ಆಗುತ್ತಿದ್ದ ಕಾರಣ ಊಟ, ಉಪಹಾರ ಲಭ್ಯವಾಗುತ್ತಿರಲಿಲ್ಲ.
ಇದೀಗ ಇಂಥವರ ಅನುಕೂಲಕ್ಕಾಗಿ ದಿನದ 24 ಗಂಟೆಗಳ ಕಾಲವೂ ಹೋಟೆಲ್, ಬೇಕರಿ, ಸ್ವೀಟ್ ಸ್ಟಾಲ್, ಐಸ್ ಕ್ರೀಮ್ ಅಂಗಡಿಗಳನ್ನು ತೆರೆಯಲು ಮಹಾನಗರ ಪಾಲಿಕೆ ಅನುಮತಿ ನೀಡುವ ಸಾಧ್ಯತೆ ಇದೆ. ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಈ ನಿಟ್ಟಿನಲ್ಲಿ ಮನವಿ ಸಲ್ಲಿಸಿದ್ದು, ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗಿದೆ.
ಈ ಕುರಿತು ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆಗಳಿದ್ದು, ಇದು ಕಾರ್ಯರೂಪಕ್ಕೆ ಬಂದ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದ 24 ಗಂಟೆಗಳ ಕಾಲವೂ ಹೋಟೆಲ್, ಬೇಕರಿ, ಸ್ವೀಟ್ ಸ್ಟಾಲ್, ಐಸ್ ಕ್ರೀಮ್ ಅಂಗಡಿಗಳ ಬಾಗಿಲು ತೆರೆದಿರಲಿದೆ. ಇದರಿಂದ ಸಾರ್ವಜನಿಕರಿಗೂ ಅನುಕೂಲವಾಗಲಿದೆ.