ರಾಜ್ಯದ ಮೊದಲ ಎಕ್ಸ್ ಪ್ರೆಸ್ ವೇ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು – ಮೈಸೂರು ಹೆದ್ದಾರಿ ಈಗಾಗಲೇ ಪೂರ್ಣಗೊಂಡಿದ್ದು, ವಾಹನಗಳ ಸಂಚಾರ ಆರಂಭವಾಗಿದೆ. ಅಲ್ಲದೆ ಶೀಘ್ರದಲ್ಲೇ ಸಂಚಾರಕ್ಕೆ ಸಂಪೂರ್ಣವಾಗಿ ಮುಕ್ತಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಇದರ ಮಧ್ಯೆ ಫೆಬ್ರವರಿ 15 ರಿಂದ ಟೋಲ್ ಸಂಗ್ರಹ ಆರಂಭವಾಗಲಿದೆ ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಲಾಗಿತ್ತು. ಅಲ್ಲದೆ ಟೋಲ್ ಶುಲ್ಕದ ಕುರಿತು ಹಲವರು ತಮಗಿರುವ ಮಾಹಿತಿಯನ್ನು ಹಂಚಿಕೊಂಡಿದ್ದರು.
ಇದೀಗ ಲಭ್ಯವಾಗಿರುವ ಮಾಹಿತಿಯಂತೆ ಸರ್ವಿಸ್ ರಸ್ತೆ ನೀಡುವವರೆಗೂ ಟೋಲ್ ಸಂಗ್ರಹಿಸುವುದು ಅನುಮಾನ ಎಂದು ಹೇಳಲಾಗಿದೆ. ಅಲ್ಲದೆ ಪ್ರತಿ ಕಿ.ಮೀಟರ್ ಗೆ ಎರಡು ರೂಪಾಯಿ ಟೋಲ್ ದರ ನಿಗದಿಯಾಗುವ ಸಾಧ್ಯತೆಯಿದ್ದು, ಹೀಗಾಗಿ ಒನ್ ವೇ ಪ್ರಯಾಣಕ್ಕೆ ಕನಿಷ್ಠ 300 ರೂಪಾಯಿ ತಗಲುವ ನಿರೀಕ್ಷೆಯಿದೆ.