alex Certify ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೋಲ್ ಸಂಗ್ರಹ ತಪ್ಪಿಸಿಕೊಳ್ಳುಲು ಹೋದ ಕೆ ಎಸ್‌ ಆರ್ ಟಿ ಸಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಆತ ಬಲಿಯಾದ ಘಟನೆ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕಣಮಿಟಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಮತ್ತೆ ವಾಪಸ್ ಯೂಟರ್ನ್ ಮಾಡಿಕೊಂಡು ಬೆಂಗಳೂರಿನತ್ತ ಬರುವಾಗ ಕುಂಬಳಗೋಡು ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಸಿದ್ದಪ್ಪ ಎಂದು ಗುರುತಿಸಲಾಗಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...