ಬೆಂಗಳೂರು – ಮೈಸೂರು ನಡುವೆ ಸಂಚರಿಸಿದ KSRTC ಎಲೆಕ್ಟ್ರಿಕ್ ಬಸ್; ಮೊದಲ ವಾಣಿಜ್ಯ ಸಂಚಾರಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡುತ್ತಿದ್ದು, ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ಸಹ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸಿದೆ.

ಸೋಮವಾರದಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿದ್ಯುತ್ ಚಾಲಿತ ಬಸ್ ಬೆಂಗಳೂರು – ಮೈಸೂರು ನಡುವೆ ಮೊದಲ ವಾಣಿಜ್ಯ ಸಂಚಾರ ನಡೆಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಮೊದಲ ದಿನವೇ ಬಸ್ಸಿನ ಬಹುತೇಕ ಸೀಟುಗಳು ಪ್ರಯಾಣಿಕರಿಂದ ಭರ್ತಿಯಾಗಿವೆ.

ಸೋಮವಾರ ಬೆಳಗ್ಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗ್ಗೆ 7.35ಕ್ಕೆ ಹೊರಟ ಬಸ್ 9.45 ಕ್ಕೆ ಮೈಸೂರು ತಲುಪಿದೆ. ಅಲ್ಲಿಂದ ಮಧ್ಯಾಹ್ನ 12.10 ಹೊರಟು 2.45 ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ತಲುಪಿದೆ. ಬಸ್ ಪ್ರಯಾಣ ದರವನ್ನು 300 ರೂಪಾಯಿ ನಿಗದಿಪಡಿಸಲಾಗಿದ್ದು, ಈ ಬಸ್ಸಿನಲ್ಲಿ ವಿದ್ಯಾರ್ಥಿ ಪಾಸ್ ಗಳಿಗೆ ಅನುಮತಿ ಇರುವುದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read