alex Certify ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ…? ಸುಳಿವು ನೀಡಿದ ಪುತ್ರ ಯತೀಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ…? ಸುಳಿವು ನೀಡಿದ ಪುತ್ರ ಯತೀಂದ್ರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಯಾವುದಾದರೊಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ಸುಳಿವು ನೀಡಿದ್ದು, ನಮ್ಮ ತಂದೆಯವರಿಗೆ ಇದು ಕೊನೆಯ ಚುನಾವಣೆ. ಅವರಿಗೆ ವಯಸ್ಸಾಗಿರುವುದರಿಂದ ಬಾದಾಮಿ ಕ್ಷೇತ್ರಕ್ಕೆ ಹೋಗಿ ಬರುವುದು ಕಷ್ಟವಾಗುತ್ತದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಯಾವುದಾದರೊಂದು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.

ನಮ್ಮ ತಂದೆಯವರು ಬಯಸಿದರೆ ನಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ಹೇಳಿದ ಯತೀಂದ್ರ ಸಿದ್ದರಾಮಯ್ಯ, ಅವರು ಮತ್ತೆ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ತಾವು ವೈದ್ಯರಾಗಿದ್ದರೂ ಸಹ ರಾಜಕೀಯ ಕ್ಷೇತ್ರದಲ್ಲಿ ಮುಂದುವರಿಯುವುದಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...