ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಹಾವೇರಿ, ಮೈಸೂರು ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈ ಮಧ್ಯೆ ಇಂದು ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.
ಪಾಕಿಸ್ತಾನ: ಅಪಾರ ಶಸ್ತ್ರಾಸ್ತ್ರಗಳಿದ್ದ ಸಿಯಾಲ್ ಕೋಟ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾರೀ ಸ್ಫೋಟ
ನಾಳೆ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಸನಿ ಚಂಡಮಾರುತ ಹಿನ್ನೆಲೆಯಲ್ಲಿ ಕೇರಳ, ತಮಿಳುನಾಡು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕರ್ನಾಟಕದ ಮೇಲೂ ಇದರ ಪರಿಣಾಮ ಬೀರುತ್ತಿದೆ.