ಕನಿಷ್ಠ ಬೆಂಬಲ ಬೆಲೆ ಅಡಿ ಬೆಳೆ ಮಾರಾಟ ಮಾಡಿದ್ದ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 2020 – 21ರ ಸಾಲಿನ ಬಾಕಿ ಮೊತ್ತವನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದ್ದು, ಅದರಂತೆ ಶುಕ್ರವಾರದಂದು ಅನುದಾನ ಬಿಡುಗಡೆ ಮಾಡಲಾಗಿದೆ.
ಒಟ್ಟು 770 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಲಾಗಿದ್ದ ಭತ್ತ, ರಾಗಿ, ಜೋಳ ಬೆಳೆದ ರೈತ ಫಲಾನುಭವಿಗಳಿಗೆ ಈ ಮೊತ್ತವನ್ನು ವಿತರಿಸಲಾಗುತ್ತದೆ.