alex Certify ಬೆಚ್ಚಿಬೀಳಿಸುತ್ತೆ ಈ ಘಟನೆ: ಚಲಿಸುತ್ತಿದ್ದ ರೈಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುತ್ತೆ ಈ ಘಟನೆ: ಚಲಿಸುತ್ತಿದ್ದ ರೈಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ದೇಶದಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆಂದು ಎಷ್ಟೇ ಕಠಿಣ ಕಾನೂನುಗಳನ್ನು ಜಾರಿಗೆ ತಂದರೂ ಸಹ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಯೇ ಇಲ್ಲ ಎಂಬಂತಾಗಿದೆ. ಈ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂತೆ ಮಧ್ಯಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ 6 ವರ್ಷದ ಬಾಲಕಿಯ ಮೇಲೆ 25 ವರ್ಷದ ಯುವಕ ಅತ್ಯಾಚಾರವೆಸಗಿದ್ದಾನೆ, ಈ ರೈಲು ಉತ್ತರ ಪ್ರದೇಶದ ಗೋರಖ್​ಪುರದಿಂದ ಮುಂಬೈಗೆ ತೆರಳುತ್ತಿತ್ತು.

ಈ ಪ್ರಕರಣದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಥಾಣೆಯ ಕಲ್ಯಾಣ್​ ಸರ್ಕಾರಿ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂತ್ರಸ್ತೆಯ ಕುಟುಂಬ ಉತ್ತರ ಪ್ರದೇಶದಿಂದ ಥಾಣೆಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಬಾಲಕಿಯು ತನ್ನ ತಾಯಿ ಹಾಗೂ ಮೂವರು ಸಹೋದರರ ಜೊತೆಯಲ್ಲಿ ಪ್ರಯಾಣಿಸುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಫೆಬ್ರವರಿ 15ರಂದು ಈ ರೈಲು ಮಧ್ಯಪ್ರದೇಶದ ಟಿರ್ಮಾನಿ ತಲುಪುತ್ತಿದ್ದಂತೆಯೇ ಆರೋಪಿಯು ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕೃತ್ಯ ಎಸಗಿದ ಆರೋಪಿಯನ್ನು ಸೋನು ಪ್ರಜಾಪತಿ ಎಂದು ಗುರುತಿಸಲಾಗಿದೆ.

ಬಾಲಕಿ ಮತ್ತು ಆಕೆಯ ತಾಯಿ ಮಲಗಿದ್ದಾಗ ಪ್ರಜಾಪತಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಎಚ್ಚರಗೊಂಡ ಬಾಲಕಿ ಕೂಡಲೇ ತನ್ನ ತಾಯಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಆರೋಪಿಯು ಸ್ಥಳದಿಂದ ಓಡಿ ಹೋಗಿ ಶೌಚಾಲಯದಲ್ಲಿ ತಲೆಮರೆಸಿಕೊಂಡಿದ್ದನು. ಸಂತ್ರಸ್ತೆಯ ತಾಯಿ ಆರೋಪಿಯ ಕಡೆಗೆ ಓಡಿ ಇತರ ಪ್ರಯಾಣಿಕರ ಸಹಾಯದಿಂದ ಆತನನ್ನು ಹಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...